24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡುಕೋಡಿ ವೈನ್ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ ಘಟನೆ ನಡೆದಿದೆ.

ನಿಟ್ಟಡೆ ಗ್ರಾಮದ ನಿವಾಸಿ ಪ್ರಸಾದ ಯಾನೆ ಬಾಡು ಪ್ರಸಾದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತಾನು ಮೋಹನ್ ಎಂಬವರೊಂದಿಗೆ ಮೂಡುಕೋಡಿ ಗ್ರಾಮದ ವೈನ್ ಶಾಪಿಗೆ ಬಂದಿದ್ದ ವೇಳೆ ಆರೋಪಿಗಳಾದ ವಸಂತ ಕೋಟ್ಯಾನ್ ಹಾಗೂ ಸಂತೋಷ್ ನಾರ್ಲ ಎಂಬವರು ಪ್ರಸಾದ್ ನನ್ನು ತಡೆದು ನಿಲ್ಲಿಸಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ. ಹಲ್ಲೆಗೆ ಒಳಗಾದ ಪ್ರಸಾದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೂರು ನೀಡಿದ್ದು ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ಘಟನೆಗೆ ಸಂಬಂಧಿಸಿಸಿದಂತೆ ವಸಂತ ಕೋಟ್ಯಾನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತನ್ನ ಮೇಲೆ ಹಾಗೂ ಸಂತೋಷ್ ಎಂಬವರ ಮೇಲೆ ಪ್ರಸಾದ್ ಯಾನೆ ಬಾಡು ಪ್ರಸಾದ್ ಎಂಬಾತ ಅವಾಚ್ಯ ಶಬ್ದಗಳಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!