ಮಂಗಳೂರು – ಚಾರ್ಮಾಡಿ ರಾಷ್ಟೀಯ ಹೆದ್ದಾರಿಯ ಅಸಮರ್ಪಕ ಕಾಮಗಾರಿಯಿಂದಾಗಿ ಸವಾರರಿಗೆ ಅಥವಾ ಸಾರ್ವಜನಿಕರಿಗೆ ತೊಂದರೆ ಯಾದರೆ ಸಂಬಂಧಪಟ್ಟ ಇಂಜಿನಿಯರ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಅವರು ಕಳೆದ ಜುಲೈ 5 ರಂದು ಮಂಗಳೂರಿನ ಜಿ ಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆ ಡಿ ಪಿ ಸಭೆಯಲ್ಲಿ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಸಂತೋಷ್ ಕುಮಾರ್, ಲಾಯಿಲರವರು ಸಾರ್ವಜನಿಕರ ಪರವಾಗಿ ಎತ್ತಿದ ಪ್ರಶ್ನೆಗೆ ಉತ್ತರಿಸುತ್ತಾ ಈ ಎಚ್ಚರಿಕೆ ನೀಡಿರುತ್ತಾರೆ.
ಅದೇ ರೀತಿ ಬೆಳಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಅಸಮರ್ಪಕ ಕಾಮಗಾರಿ ಬಗ್ಗೆ ಎತ್ತಿದ ಪ್ರಶ್ನೆಗೆ ತಕ್ಷಣ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಇಂಜಿನಿಯರ್ ರವರನ್ನು ಕರೆಸಿದ ಉಸ್ತುವಾರಿ ಸಚಿವರು ಸರಿಯಾಗಿ ಕಾಮಗಾರಿ ನಿರ್ವಹಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸೂಚಿಸಿದರು.