ಪುಂಜಾಲಕಟ್ಟೆ :ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವು ಜು.08 ರಂದು ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿ ನಾಯಕತ್ವ ಗುಣಗಳಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಲು ಕಾಲೇಜಿನ ವಿದ್ಯಾರ್ಥಿ ಸಂಘ ಅನುವು ಮಾಡಿಕೊಡುತ್ತದೆ. ನನಗೂ ಈ ಸಂಸ್ಥೆಯ ಹಳೆವಿದ್ಯಾರ್ಥಿಯಾಗಿ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘದ ಕಾರ್ಯಾಚಟುವಟಿಕೆಗಳು ಪೂರಕವಾದವು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ. ಡಿ. ನಿರ್ದಿಷ್ಟ ಗುರಿ ಸಾಧನೆಗೆ ಹಾದಿ. ಈ ಗುರಿ ತಲುಪುವಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಕರ್ತವ್ಯದ ಬಗ್ಗೆ ಮತ್ತು ನಾಯಕತ್ವದ ಗುಣಗಳ ಬಗ್ಗೆ ತಿಳಿಸಿ ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ವಿದ್ಯಾರ್ಥಿಗಳನ್ನುದ್ದೇಶಿಸಿ ಸಂಘಟಿತ ನಾಯಕತ್ವದಿಂದ ಯಾವುದೇ ಕ್ಲಿಷ್ಟಕರ ಸಮಸ್ಯೆಯನ್ನು ಕೂಡ ಬಗೆಹರಿಸಬಹುದು ಮತ್ತು ವಿದ್ಯಾರ್ಥಿಗಳು ಹೆಚ್ಚು ಸಂಘಟಿತರಾಗಿ ಕಾರ್ಯನಿರ್ವಹಿಸಿದಲ್ಲಿ ಸಂಸ್ಥೆ ಪ್ರಗತಿ ಹೊಂದುತ್ತದೆ ಮಾತ್ರವಲ್ಲ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹೆಚ್ಚಿಸಲು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಸ್ವಾಗತಿಸಿ, ಚುನಾಯಿತ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ 21 ವಿದ್ಯಾರ್ಥಿ ಗಳನ್ನು ಪ್ರಶಸ್ತಿಪತ್ರ ಮತ್ತು ನಗದು ಬಹುಮಾನದೊಂದಿಗೆ ಸನ್ಮಾನಿಸಲಾಯಿತು.
ಪ್ರಸ್ತುತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಸಭಾಧ್ಯಕ್ಷರು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪ ನವೀನ್, ಪದವಿಪೂರ್ವಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ. ಡಿ., ವಾಣಿ ವಿದ್ಯಾಸಂಸ್ಥೆಯ ಪ್ರಾಚಾರ್ಯರು ಯದುಪತಿ ಗೌಡ ಪುರಸ್ಕಾರ ಪ್ರದಾನ ಮಾಡಿದರು.
ಸಭಾಧ್ಯಕ್ಷರಾದ ಶ್ರೀಮತಿ ರೂಪ ನವೀನ್ ಚುನಾಯಿತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಎಳೆವೆಯಲ್ಲೇ ಪರಿಶ್ರಮ, ತ್ಯಾಗ ಮತ್ತು ಜವಾಬ್ದಾರಿಯುತ ನಡವಳಿಕೆಗಳನ್ನು ಮೈಗೂಡಿಸಿಕೊಳ್ಳಲು ಹಿತವಚನ ನೀಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ. ವಸಂತಿ ಬಹುಮಾನ ಪಟ್ಟಿ ವಾಚಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಜಯಶ್ರೀ ಕೆ ಏನ್, ರಸಾಯನಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಿನುತಾ, ಗಣಿತಶಾಸ್ತ್ರ ಉಪನ್ಯಾಸಕರಾದ ಶ್ವೇತಾ ಮತ್ತು ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಸಹಕರಿಸಿದರು.
ಭೌತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ತಾಹಿರ ಬಾನು ವಂದಿಸಿದರು. ಇತಿಹಾಸ ಉಪನ್ಯಾಸಕಿ ಶ್ರೀಮತಿ ಅನ್ನಪೂರ್ಣ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಎಲ್ಲಾ ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.