ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ , ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅಳದಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜು.5 ರಂದು ಕಾಲೇಜಿನ ಸಭಾಭವನದಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.


ಬೆಳ್ತಂಗಡಿ ಜೆ ಎಂ ಎಫ್ ಸಿ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾದ ವಿಜಯೇಂದ್ರ ಟಿ ಎಚ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾನೂನಿನ ಚೌಕಟ್ಟಿನಲ್ಲಿ ಬದುಕಿದಾಗ ಆದರ್ಶಮಯವಾದ ಬದುಕನ್ನು ಸಾಗಿಸಬಹುದು ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಸಂಯಮ ರೂಡಿಸಿಕೊಂಡು ಓದಿದಾಗ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬಹುದು ಎಂದರು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘ ಬೆಳ್ತಂಗಡಿಯ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿಗಳಾದ ನ್ಯಾಯವಾದಿ ನವೀನ್ ಬಿ ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ಯಾರಾ ಲೀಗಲ್ ಕಮಿಟಿಯ ಸದಸ್ಯರಾದ ರಾಘವೇಂದ್ರ ಶೇಟ್, ದಯಾನಂದ, ಪುಷ್ಪಲತಾ ರವರು ಉಪಸ್ಥಿತರಿದ್ದರು. ವಕೀಲರಾದ ಶ್ರೀಮತಿ ಅಸ್ಮಾ ರವರು ಕಾನೂನು ಮಾಹಿತಿ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ವಹಿಸಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕರಾದ ಹರೀಶ್ ರೈ ಸ್ವಾಗತಿಸಿ, ಗಣಿತ ಉಪನ್ಯಾಸಕರಾದ ಸದಾನಂದ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಜಯ ಪೂಜಾರಿಯವರು ವಂದಿಸಿದರು.

Leave a Comment

error: Content is protected !!