September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಈ ಹಿಂದಿನ ಅವಧಿಯಲ್ಲಿ ವಿವಿಧ ಕಾಮಗಾರಿಯಲ್ಲಿ ದುರುಪಯೋಗವಾಗಿದೆ ಎಂಬ ಆರೋಪದ ದೂರಿನ ಹಿನ್ನಲೆಯಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಜು.9 ಹಾಗೂ ಜು.10ರಂದು ಎರಡು ದಿನ ಇಂದಬೆಟ್ಟುವಿಗೆ ಆಗಮಿಸಿ ಕಡತ ಪರಿಶೀಲನೆ ಹಾಗೂ ಸ್ಥಳ ತನಿಖೆ ನಡೆಸಿದರು.


ಇಂದಬೆಟ್ಟು ನಿವಾಸಿ ಜಯರಾಮ ಗೌಡ ಅವರು ಇಂದಬೆಟ್ಟು ಗ್ರಾಮ ಪಂಚಾಯತದಲ್ಲಿ 2022-21 ಹಾಗೂ 2021-22ನೇ ಸಾಲಿನಲ್ಲಿ ಚರಂಡಿ, ಆರ್ತ್‌ವರ್ಕ್, ಮೋರಿ, ಸೇತುವೆ ಸೇರಿದಂತೆ ಸುಮಾರು 20 ಕಾಮಗಾರಿಗಳಲ್ಲಿ ದುರುಪಯೋಗವಾಗಿದೆ. ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ, ಕಾಮಗಾರಿ ನಡೆಸದೆ ಬಿಲ್ಲುಗಳನ್ನು ಪಾಸ್ ಮಾಡಲಾಗಿದೆ. ಕಾಮಗಾರಿ ಸೂಚಿಸಿದ ಸ್ಥಳಗಳಲ್ಲಿ ನಡೆಸಿಲ್ಲ ಮೊದಲಾದ ಆರೋಪಗಳನ್ನು ಮಾಡಿ ತನಿಖೆಗೆ ನಡೆಸುವಂತೆ ಲೋಕಾಯುಕ್ತರಿಗೆ ಆಗಿನ ಪಿಡಿಒ ಸವಿತಾ, ಗ್ರಾ.ಪಂ ಅಧ್ಯಕ್ಷ ಅನಂದ ಅಡೀಲು, ಇಂಜಿನಿಯರ್ ಹರ್ಷಿತ್ ವಿರುದ್ಧ 2023 ಜೂನ್ ತಿಂಗಳಲ್ಲಿ ಬೆಂಗಳೂರು ಲೋಕಾಯಯಕ್ತರಿಗೆ ದೂರು ನೀಡಿದ್ದರು. ಅದಕ್ಕೆ ಮೊದಲು ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಪಂಚಾಯತ್ ಎದುರು ಪ್ರತಿಭಟನೆ ಕೂಡ ನಡೆಸಲಾಗಿತ್ತು.


ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ಅಂತರಿಕ ತನಿಖೆ ನಡೆಸುತ್ತಿದ್ದರು. ಇದೀಗ ಜು.9 ರಂದು ಬೆಳಗ್ಗೆ ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಮತ್ತೆ ಜು.10 ರಂದು ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಬಂದು ಸ್ಥಳ ತನಿಖೆ ನಡೆಸಿ ದೂರುದಾರ ಜಯರಾಮ್ ಬಂಗಾಡಿ ಜೊತೆ ದೂರು ನೀಡಿದ ಕಾಮಗಾರಿಗಳ ಪರಿಶೀಲನೆ ನಡೆಸಿ ಮಹಜರ್ ಮಾಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಆನಂದ ಅಡೀಲು, ಈ ಹಿಂದಿನ ಪಿಡಿಒ ಸವಿತಾ ಬಿ.ಸಿ, ಇಂಜಿನಿಯರ್ ಹರ್ಷಿತ್ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!