ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ : ತಾಲೂಕಿನ ವಿವಿಧ ಗ್ರಾಮಗಳಿಂದ ದಿನನಿತ್ಯ ಕಂದಾಯ ಇಲಾಖೆಗೆ ಒಂದಲ್ಲ ಒಂದು ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಸಮಸ್ಯೆಯಾಗುತ್ತಿದೆ.

ತಾಲೂಕು ಆಡಳಿತ ಕಚೇರಿಗೆ ಖಾಲಿಯಿರುವ ಹುದ್ದೆಗಳನ್ನು ತುಂಬಿದರೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಇಂದು(ಜು.11) ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ರವರಿಗೆ ಮನವಿ ಸಲ್ಲಿಸಿದರು. ಮನವಿಗೆ ಕಂದಾಯ ಸಚಿವರು ಪೂರಕವಾಗಿ ಸ್ಪಂದಿಸಿದರು

ಬೆಳ್ತಂಗಡಿ ತಾಲೂಕು ಕಚೇರಿಗೆ 97 ಹುದ್ದೆ ಗಳು ಮಂಜೂರಾತಿ ಅಗಿದ್ದು 55 ಹುದ್ದೆಗಳು ಭರ್ತಿಯಾಗಿದೆ. 42 ಹುದ್ದೆಗಳು ಖಾಲಿ ಇದೆ.

ಎಂಟು ಜನ ನಿಯೋಜನೆ ಮೇರೆಗೆ ಬೇರೆ ತಾಲೂಕು, ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!