ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿಬಂಧು ಜ್ಞಾನವಿಕಾಸ ಸ್ವ ಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ಘಟಕ ಅರಸಿನಮಕ್ಕಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ ಜು. 12ರಂದು ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ಸಭಾಭವನದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಂಜಿರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಶಿವರಾಮ ಗೌಡ ವಹಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ನೆರವೇರಿಸಿದರು. ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಂಜುನಾಥ ಗೌಡ ಕುಕ್ಕುಂಜ ದಾಖಲಾತಿ ಪತ್ರ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಅಡ್ಕಾಡಿ, ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ , ಅರಸಿನಮಕ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕರು ಧರ್ಮರಾಜ್ ಅಡ್ಕಾಡಿ, ಅರಸಿನಮಕ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್ , ಸಮಾಜ ಸೇವಕರು, ಹಾಗೂ ಪ್ರಗತಿಪರ ಕೃಷಿಕರು ಪದ್ಮಪ್ಪ ಪೂಜಾರಿ ‘ಶಿವಗಿರಿ’ ಒಟ್ಲ ಶಿಶಿಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯೆ ಶ್ರೀಮತಿ ಮಂಜುಳಾ ಕಾರಂತ್ , ನಿಕಟ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಅರಸಿನಮಕ್ಕಿ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ಜಯಶ್ರೀ ಬಳಗದವರು ಪ್ರಾರ್ಥಿಸಿ, ಪೆರ್ಲ ಒಕ್ಕೂಟದ ಕಾರ್ಯದರ್ಶಿ ಮಹೇಶ್ ಶೆಟ್ಟಿಗಾರ್ ಸ್ವಾಗತಿಸಿ, ವಲಯ ಒಕ್ಕೂಟದ ಮೇಲ್ವಿಚಾರಕಿ ಶಶಿಕಲಾ ವರದಿ ವಾಚಿಸಿದರು.

Leave a Comment

error: Content is protected !!