September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಕಾರ್ಯಕ್ರಮವನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿ, ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಂಡಾಗ ವ್ಯಕ್ತಿತ್ವ ವಿಕಸನ ವಾಗುವುದು. ಅವಕಾಶಗಳನ್ನು ಕೈ ಚೆಲ್ಲದೆ ಪ್ರತಿಯೊಬ್ಬರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಯನ್ನು ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.


ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ಟ ರವರು ವಿದ್ಯಾರ್ಥಿಗಳು ರಚಿಸಿದ ಬಣ್ಣದ ಚಿಟ್ಟೆಯ ರೆಕ್ಕೆಯನ್ನು ಅರಳಿಸುವುದರ ಮೂಲಕ ವಿವಿಧ ಸಂಘಗಳ ನಾಮಫಲಕವನ್ನು ಅನಾವರಣಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.
ನಿಡ್ಲೆ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ಅಧಿಕಾರಿಯಾದ ಶ್ರೀಮತಿ ಪ್ರತಿಮ ಹಾಗೂ
ಶ್ರೀ ಧ. ಮ.ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯಾದ ಧನ್ಯ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಪದ್ಮರಾಜು ಎನ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಅಧ್ಯಾಪಕರ ಪರವಾಗಿ ಶಿಕ್ಷಕ ಜಯರಾಮಯ್ಯ ಅವರು ನಿವೃತ್ತ ಮುಖ್ಯ ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ತ್ರಿವೇಣಿಯವರು ನಿವೃತ್ತರ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿಗಳ ಪರವಾಗಿ ನಿಧೀಶ್ ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕಿ ಜಯಶ್ರೀ ಜೈನ್ ಅವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕನ್ನಡ ಶಿಕ್ಷಕ ಯುವರಾಜ ರವರು ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ಧನ್ಯವಾದವಿತ್ತರು. ವಿದ್ಯಾರ್ಥಿನಿಯರಾದ ವಿನನ್ಯ ಹಾಗೂ ಸ್ನೇಹ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya
error: Content is protected !!