24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭವನದಲ್ಲಿ ಜು.13ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಪ್ರತಿಯೊಬ್ಬನ ಜೀವನದಲ್ಲಿಯೂ ನಾಯಕತ್ವದ ಗುಣವಿರಬೇಕು. ಅಂತರ್ಗತವಾಗಿರುವಂತಹ ನಾಯಕತ್ವ ಗುಣ ಕೈ ಹಿಡಿದರೆ ಯಾವುದೇ ಕ್ಷೇತ್ರದಲ್ಲಿ ಪ್ರತಿಭಾವಂತ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯವಿದೆ ಎಂದರು.

ಪ್ರಾಚಾರ್ಯರಾದ ಸುಕುಮಾರ್ ಜೈನ್ ನೂತನ ವಿದ್ಯಾರ್ಥಿ ಸಂಘದ ನಾಯಕರುಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾದ 57 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಕೀಲರು ಬಿ.ಕೆ ಧನಂಜಯ್ ರಾವ್, ಲೋಬೊ ಟಿವಿಎಸ್ ಶೋರೂಮ್ ನ ಮಾಲಕ ರೋನಾಲ್ಡ್ ಲೋಬೊ, ನಿವೃತ್ತ ಕಂದಾಯ ನಿರೀಕ್ಷಕರಾದ ಪದ್ಮಕುಮಾರ್ ಉಪಸ್ಥಿತರಿದ್ದರು.

ಗೌತಮಿ ಮತ್ತು ಬಳಗ ಪ್ರಾರ್ಥಿಸಿದರು. ಅನುಷಾ ನಿರೂಪಿಸಿದರು. ಪ್ರಾಧ್ಯಾಪಕರಾದ ಆನಂದ್ ಸ್ವಾಗತಿಸಿ, ತಾರನಾಥ್ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!