ಬೆಳ್ತಂಗಡಿ: ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕಾರ್ಪಣೆಗೊಂಡಿತು.
ಕೇಂದ್ರ ಕಚೇರಿ ಕಟ್ಟಡವನ್ನು ಬೆಂಗಳೂರು ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಭಗೀರಥ ಜಿ ವಹಿಸಿದ್ದರು.
ಆಡಳಿತ ಕಚೇರಿಯ ಉದ್ಘಾಟನೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿ ಶುಭ ಕೋರಿದರು.
ಭದ್ರತಾ ಕೊಠಡಿ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು. ಸಭಾಭವನದ ಉದ್ಘಾಟನೆಯನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇರವೇರಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ ಎಸ್. ಕೋಟ್ಯಾನ್ ನೇರವೇರಿಸಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಪಿ, ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ವಿಶೇಷಾಧಿಕಾರಿಗಳಾದ ಎಂ. ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅಶ್ವತ್ಥ್ ಕುಮಾರ್, ನಿರ್ದೇಶಕರಾದ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ,ತನುಜಾ ಶೇಖರ್, ಕೆ.ಪಿ.ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ,ಹೆಚ್.ಧರ್ಣಪ್ಪ ಪೂಜಾರಿ, ಗಂಗಾಧರ ಮಿತ್ತಮಾರು,ಜಯವಿಕ್ರಮ ಪಿ,ಧರಣೇಂದ್ರ ಕುಮಾರ್,ಆನಂದ ಪೂಜಾರಿ ಸರ್ವೆದೋಳ,, ಡಾ.ರಾಜಾರಾಮ ಕೆ.ಬಿ ಹಾಗೂ ಶಾಖಾ ವವ್ಯವಸ್ಥಾಪಕರು, ಸಿಬ್ಬಂದಿವರ್ಗದವರು, ಸದಸ್ಯರು, ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.
ದಿನೇಶ್ ಸುವರ್ಣ ರಾಯಿ ಹಾಗೂ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.
ಸಂಕೀರ್ಣದಲ್ಲಿ ನೆಲ ಮಹಡಿಯಲ್ಲಿ ಸಂಘಕ್ಕೆ ಬರುವ ಗ್ರಾಹಕರಿಗೆ ಸುಸಜ್ಜಿತವಾದ ಪಾರ್ಕಿಂಗ್ ಹೊಂದಿದ್ದು, ಕೆಳಮಹಡಿ ಮತ್ತು ಪ್ರಥಮ ಮಹಡಿಯು ವಾಣಿಜ್ಯ ಉದ್ದೇಶಕ್ಕೆ ಅನುಗುಣಾವಾದ ಸ್ಥಳವಾಗಿರುತ್ತದೆ. 2ನೇ ಮಹಡಿಯಲ್ಲಿ ಸುಸಜ್ಜಿತವಾದ ಆಡಳಿತ ಕಚೇರಿಯನ್ನು ಹೊಂದಿದ್ದು, 3ನೇ ಮಹಡಿಯು ಸುಮಾರು 300 ರಷ್ಟು ಸಂಖ್ಯೆಯ ಸಾಮಾರ್ಥ್ಯ ಹೊಂದಿರುವ ಸಭಾಂಗಣವನ್ನು ಹೊಂದಿರುತ್ತದೆ. ಗ್ರಾಹಕರ ಅನುಕೂಲಕ್ಕಾಗಿ ಲಿಪ್ಟ್ ಸೌಲಭ್ಯ, ೬೦ ಕಿಲೋವ್ಯಾಟ್ ಸಾಮಾರ್ಥ್ಯದ ಸೋಲಾರ್ ಅಳವಡಿಕೆ ಮಾಡಲಾಗಿರುತ್ತದೆ