ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಬಂದಾರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಮತ್ತು ಅಂಗನವಾಡಿ ಕೇಂದ್ರ ಮೈರೋಳ್ತಡ್ಕ ಇಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯ ನಡೆಯಿತು.

ಶಾಲೆಯ ಅಡಿಕೆ ತೋಟದಲ್ಲಿ ಕಳೆ ಗಿಡಗಳನ್ನು ತೆಗೆದು ತೆಂಗಿನ ಮತ್ತು ಅಡಿಕೆ ಬುಡಕ್ಕೆ ಹಾಕಲಾಯಿತು. ಮತ್ತು ಅಂಗನವಾಡಿಯಲ್ಲಿ ತರಕಾರಿ ಗಿಡಗಳನ್ನು ನೆಟ್ಟು ಶಾಲಾ ಅವರಣವನ್ನು ಸ್ವಚ್ಛಗೊಳಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮೈರೋಳ್ತಡ್ಕ ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಚಂದ್ರಾವತಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಾಣಿ ಧನ್ಯವಾದ ಸಲ್ಲಿಸಿದರು. ಶ್ರಮದಾನದಲ್ಲಿ ಒಕ್ಕೂಟದ ಸದಸ್ಯರು, ಶಾಲಾ ಮಕ್ಕಳ ಪೋಷಕರು ಸಹಕಾರ ನೀಡಿದರು.