32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಯುರಾಲಜಿಸ್ಟ್(ಮೂತ್ರ ರೋಗ ತಜ್ಞ) ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಅವರಿಗೆ ಪ್ರತಿಷ್ಠಿತ ಪ್ರೈಡ್ ಆಫ್ ನೇಷನ್ ಅವಾರ್ಡ್ ಲಭಿಸಿದೆ.

ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್‌ನಲ್ಲಿ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಸಂಸದರಾದ ಜಗದೀಶ್ ಶೆಟ್ಟರ್, ಡಾ.ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಕನ್ ಪ್ರೋವರ್ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ನಿವಾಸಿ ಡಾ. ಸದಾನಂದ ಪೂಜಾರಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ಸುಮಾರು 10ಕ್ಕೂ ಅಧಿಕ ವರ್ಷದಿಂದ ವೈದ್ಯರಾಗಿದ್ದಾರೆ. ಅವರಿಗೆ ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ. ರಾಯ್ ರಾಜ್ಯ ಪ್ರಶಸ್ತಿ ಲಭಿಸಿತ್ತು. ಅವರು ವೆನ್ಲಾಕ್‌ನಲ್ಲಿ ಸಾವಿರಾರು ಬಡ ರೋಗಿಗಳಿಗೆ ಮಾರ್ಗದರ್ಶಕರಾಗಿದ್ದಾರೆ.

Related posts

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya
error: Content is protected !!