April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ. ಸುಬ್ರಹ್ಮಣ್ಯ ಭಟ್ , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರು ಸಮಯದ ಸದುಪಯೋಗ ಮಾಡಿ ಇಂತಹ ಉತ್ತಮ ಕೃತಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಶುಭಾಶಯ ತಿಳಿಸಿದರು.

ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya
error: Content is protected !!