September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ ಜು.14ರಂದು ಸಮಿತಿಯ ಅಧ್ಯಕ್ಷ ಹರ್ಷಿತ್ ನಿನ್ನಿಕಲ್ಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ 2023ನೇ ಸಾಲಿನ ಕಾರ್ಯಕ್ರಮಗಳ ವರದಿಗಳನ್ನು ಕಾರ್ಯದರ್ಶಿ ವಿನಯ್ ಎಂ.ಎಸ್. ಸಭೆಯ ಮುಂದಿಟ್ಟರು, ಜಮಾ ಖರ್ಚು ವಿವರಗಳನ್ನು ಕೋಶಾಧಿಕಾರಿ ಹರೀಶ್ ಎಲ್. ನೀಡಿದರು. ನಂತರ 2024-25ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ಅಧ್ಯಕ್ಷರಾಗಿ ರವಿಚಂದ್ರ ನಾಡೆಂಜ, ಕಾರ್ಯದರ್ಶಿಯಾಗಿ ಅನಿಲ್ ವಿಕ್ರಂ ಡಿ ಸೋಜ, ಕೋಶಾಧಿಕಾರಿಯಾಗಿ ಸಂತೋಷ್ ಸಿಕ್ವೇರಾ ಹಿಮರಡ್ಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷಯ್ ನಿನ್ನಿಕಲ್ಲು, ಜೊತೆ ಕೋಶಾಧಿಕಾರಿಯಾಗಿ ಸುರೇಂದ್ರ ಶೆಟ್ಟಿ ಕುಂಡಡ್ಕ ಪುದ್ದೋಟ್ಟು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಆ.26ರಂದು 33ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಪಡ್ಲಾಡಿ ಶಾಲಾ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಹಾಗೂ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ನಡೆಸುವ ಬಗ್ಗೆ ತೀರ್ಮಾನಿಸಿ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಅಧ್ಯಕ್ಷ ರವಿಚಂದ್ರ ನಾಡೆಂಜ ಎಲ್ಲರ ಸಹಕಾರ ಕೋರಿದರು. ಕಾರ್ಯದರ್ಶಿ ಅನಿಲ್ ವಿಕ್ರಂ ಡಿಸೋಜ ಧನ್ಯವಾದವಿತ್ತರು.

Related posts

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!