ಮಡಂತ್ಯಾರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ.ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ, ಜೀವನದಲ್ಲಿ ದೊರೆಯುವ ಸಣ್ಣ ಸಣ್ಣ ಅವಕಾಶಗಳನ್ನು ಬಳಸಿಕೊಂಡಾಗ ಮಹತ್ತರ ಸಾಧನೆಯನ್ನು ಮಾಡಹುದು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ .ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಹೊರತರಲು ಪ್ರೇರೇಪಿಸುತ್ತಾರೆ ಎಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಆಂಗ್ಲವಿಭಾಗದ ಮುಖ್ಯಸ್ಥ ಲಿಯೋ ನರೋನ್ಹಾ ಹೇಳಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ವಂ|ಜೆರೊಮ್ ಡಿಸೋಜಾ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಹೇಮಲತಾ ಎಂ ಸ್ವಾಗತಿಸಿ, ಉಪನಿರ್ದೇಶಕಿ ಲಾವಣ್ಯ ಆಳ್ವಾ ಕೆ ವಂದಿಸಿ, ವಿದ್ಯಾರ್ಥಿ ನಾಯಕ ಗ್ಲೆನ್ ಪ್ರೀತಂ ರೊಡ್ರಿಗಸ್, ಜೊತೆ ಕಾರ್ಯದರ್ಶಿ ಮೆಲಿಟಾ ಮಿನೇಜಸ್ ಅನಿಸಿಕೆ ಹಂಚಿಕೊಂಡರು.
ವಿದ್ಯಾರ್ಥಿಗಳಾದ ಫಾತಿಮತ್ ಅಝ್ಮಿಯ ಹಾಗೂ ಸಹನಾ ಕಾರ್ಯಕ್ರಮ ನಿರೂಪಿಸಿದರು.