April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ವೇಣೂರು ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ಅವಧಿ ಕೊನೆಗೊಂಡಿದ್ದು 2ನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷರು ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿಯಾಗಿದ್ದು, ಎಲ್ಲಾ 24 ಸದಸ್ಯರು ಭಾರತೀಯ ಜನತಾ ಪಾರ್ಟಿ ಬೆಂಬಲಿತರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ೪ ಸದಸ್ಯರುಗಳಾದ ವೀಣಾ ದೇವಾಡಿಗ, ಲೀಲಾವತಿ ಬಜಿರೆ, ಶಂಭಾಷಿಣಿ ಮತ್ತು ಮಲ್ಲಿಕಾ ಕಾಶಿನಾಥ್ ಹೆಗ್ಡೆ ಆಕಾಂಕ್ಷಿಗಳಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಲೋಕಯ್ಯ ಪೂಜಾರಿ ಮತ್ತು ಉಮೇಶ್ ಎನ್. ಆಕಾಂಕ್ಷಿಗಳಾಗಿದ್ದು, ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಪ್ರಕ್ರಿಯೆ ನಡೆಸಿದರು. ಆಡಳಿತಾಧಿಕಾರಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವಿ ಕುಮಾರ್, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ನಿಕಟ ಪೂರ್ವ ಅಧ್ಯಕ್ಷ ನೇಮಯ್ಯ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷೆ ಪುಷ್ಪಾ ಡಿ. ಪಂಚಾಯತ್ ಸದಸ್ಯರು ಹಾಜರಿದ್ದರು. ಸದಸ್ಯ ಸುಂದರ ಹೆಗ್ಡೆ ಕೃತಜ್ಞತೆ ಸಲ್ಲಿಸಿದರು.

ಪಕ್ಷದ ವತಿಯಿಂದ ನೂತನ ಅಧ್ಯಕ್ಷರನ್ನು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!