32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಕಲ್ಲೇರಿ : ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಕಲ್ಲೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶ್ರೀದೇವಿ ಅಣವು ಕಾಂಪ್ಲೆಕ್ಸ್ ಕಲ್ಲೇರಿಯಲ್ಲಿ ಜು. 14 ರಂದು ಶುಭಾರಂಭಗೊಂಡಿತು.

ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ತಣ್ಣೀರುಪoತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ, ಬೆಳ್ತಂಗಡಿ ತಾಲೂಕು ಆರೋಗ್ಯಧಿಕಾರಿ ಡಾ.ಸೌಜನ್ಯ, ಉಪ್ಪಿನಂಗಡಿ ಸಮುದಾಯ ಅರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಕೃಷ್ಣಾನoದ ಕೆ, ತಣ್ಣೀರುಪoತ ಸಿ.ಏ. ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಪದ್ಮುಂಜ ಸಿ. ಏ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯವಿಕ್ರಂ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಸಾಮ್ರಾಟ್, ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನೆಯ ಮಾಜಿ ನೋಡಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಪುತ್ತಿಲ ಗುತ್ತು, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಅಧ್ಯಕ್ಷರಾದ ಸುನಿಲ್ ಗೌಡ ಅಣವು ಉಪಸ್ಥಿತರಿದ್ದರು.


ಮಾಲಕರಾದ ವಿದ್ಯಾಧರ ಜೈನ್ ಪದ್ಮವಿದ್ಯಾ ಉಪ್ಪಿನಂಗಡಿ ಮತ್ತು ಮನೆಯವರು ಬಂದoತಹ ಅತಿಥಿ ಅಭ್ಯಾಗತರನ್ನು ಉಪಚರಿಸಿ, ಸತ್ಕರಿಸಿದರು. ಕಡಿಮೆ ಬೆಲೆಯಲ್ಲಿ ಎಲ್ಲಾ ಔಷಧಿಗಳು ಲಭ್ಯವಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದರು.

Related posts

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya
error: Content is protected !!