32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ಪದ್ಮುಂಜ : ‘ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದ್ಮುಂಜ ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಜು. 14 ರಂದು ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಬೆಂಗಳೂರು ಯುವ ಉದ್ಯಮಿ ಕಿರಣ್‌ಚಂದ್ರ ಡಿ., ಪುಷ್ಪಗಿರಿ , ಉಪ್ಪಿನಂಗಡಿ ವಿಶ್ವ ಹಿಂದೂ ಪರಿಷತ್ ಪ್ರಖಂಡ ಕಾರ್ಯದರ್ಶಿ ರಾಜಶೇಖರ, ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಧ್ಯಕ್ಷ ದಿನೇಶ್‌ ಶೆಟ್ಟಿ, ಮಲೆಂಗಲ್ಲು ,ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಯನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಾದ ಉರುವಾಲು ವೀರ ಸಾವರ್ಕರ್ ಬ್ರಿಗೇಡ್‌, ನವ ಕೇಸರಿ ಮಲೆಂಗಲ್ಲು, ಕಣಿಯೂರು ಯುವ ಕೇಸರಿ, ಪದ್ಮುಂಜ ಸಿ.ಎ. ಬ್ಯಾಂಕ್, ಅಡೆಂಜ ಜ್ಞಾನ ಜ್ಯೋತಿ ಫ್ರೆಂಡ್ಸ್, ಪದ್ಮುಂಜ ಹಾಲು ಉತ್ಪಾದಕರ ಸಂಘ, ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನ ಟ್ರಸ್ಟ್ , ಪದ್ಮುಂಜ ಸಹರಾ ಫ್ರೆಂಡ್ಸ್, ಬಂದಾರು ರಾಮನಗರ ಜೈ ಶ್ರೀ ರಾಮ್ ಗೆಳೆಯರ ಬಳಗ ಸಹಕರಿಸಿದರು.

Related posts

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!