ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ “ಘನತೆಯ ಸಮಾಜಕ್ಕೆ ಒಂದಾಗೋಣ” ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಮಾ ಉಜಿರೆಯವರ ನೇತೃತ್ವದಲ್ಲಿ ಜು.16 ರಂದು ಬೆಳ್ತಂಗಡಿ ಜೆ.ಎಮ್.ಎಫ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಮಾ ಉಜಿರೆ ಪ್ರಸಕ್ತ ಸನ್ನಿವೇಶದಲ್ಲಿ ಮಹಿಳೆಯರು ಸಂಘಟಿತ ಹೋರಾಟದ ಅಗತ್ಯತೆಯ ಬಗ್ಗೆ ತಿಳಿಸಿದರು. ಮುಖ್ಯ ಅತಿಯಾಗಿ ಆಗಮಿಸಿದ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಪರಂಗಿಪೇಟೆಯವರು ಮಾತನಾಡಿ ಮಹಿಳೆ ಮಾನವ ಕುಲದ ಮುಖ್ಯ ಭಾಗವಾಗಿದ್ದು, ನಮ್ಮ ದೇಶದ ಸಾಂಸ್ಕೃತಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಆದ್ದರಿಂದ ಭಾರತಿಯ ಸಂವಿಧಾನ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ ಹಾಗೂ ದೇಶಕ್ಕೆ ಸ್ವಾತಂತ್ರ ಸಿಕ್ಕಿ ವರುಷ ಕಳೆದು ಅನೇಕ ಸಾಧನೆಗಳು ಪ್ರಗತಿಗಳು ನಡೆದರೂ ಮಹಿಳೆಯರ ವಿಚಾರದಲ್ಲಿ ಸಂವಿಧಾನ ನೀಡಿರುವ ಹಕ್ಕುಗಳನ್ನು ಸಂಪೂರ್ಣವಾಗಿ ಪಡೆಯಲು ಸಾಧ್ಯವಾಗಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಕ್ಕುಗಳನ್ನು ಕಸಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯೆ, ಬಂಟ್ವಾಳ ಪುರಸಭಾ ಸದಸ್ಯರಾದ ಝೀನತ್ ಗೂಡಿನಬಳಿ ಅವರು ಭಾರತದ ರಾಜಕೀಯ ಸನ್ನಿವೇಶ ಮತ್ತು ರಾಜಕೀಯದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದಲ್ಲಿ ವಿಷಯ ಮಂಡಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ನವಾಝ್ ಕಟ್ಟೆ ಅವರು ವುಮೆನ್ ಇಂಡಿಯಾ ಮೂವ್ಮೆಂಟ್ ಇದರ ಕರಪತ್ರ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿದ್ದರು. ಕಾರ್ಯದರ್ಶಿ ನಸೀಮಾ ಸ್ವಾಗತಿಸಿ, ಉಪಾಧ್ಯಕ್ಷೆ ತಸ್ವಿನಾ ವಂದಿಸಿದರು.
ಕಾರ್ಯಕ್ರಮದಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಕರಪತ್ರ ಹಿಡಿಯುವ ಮೂಲಕ ಬೆಂಬಲವನ್ನು ಸೂಚಿಸಲಾಯಿತು. ಈ ಸಂದರ್ಭ ಸುಮಾರು 25 ಮಹಿಳೆಯರು ವಿಮ್ ಸದಸ್ಯತ್ವ ಸ್ವೀಕರಿಸಿದರು.