ಬೆಳ್ತಂಗಡಿ: ಕುಮಟಾ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ, ನೆರಹಾವಳಿ ಮತ್ತು ಗುಡ್ಡ ಕುಸಿತದ ಪರಿಣಾಮವಾಗಿ ಹಲವು ಮನೆಗಳು ಮುಳುಗಡೆಯಾಗಿದ್ದು ನೆರೆಪೀಡಿತ ಪ್ರದೇಶದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು ನೀಡಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಈ ಬಗ್ಗೆ ಮಾಹಿತಿ ಪಡೆದುಕೊಂಡು ಸುಮಾರು 80 ಜನರಿಗೆ ತುರ್ತಾಗಿ ಬೇಕಾದ ಚಾಪೆ, ಬೆಡ್ ಶೀಟ್ ಹಾಗೂ ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಮಾಡಿದ್ದಾರೆ.
ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ವಸ್ತುಗಳನ್ನು ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.