ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಭಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅದ್ದೂರಿ ಸ್ವಾಗತ ದೊರೆಯಿತು.
ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ವಿ ಸೋಮಣ್ಣ ಅವರನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.
ಬಳಿಕ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣರವರು ಮಾತನಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರಿಗೆ ದೊಡ್ಡ ಭವಿಷ್ಯವಿದೆ. ಕೇವಲ ಐದಾರು ವರ್ಷದಲ್ಲಿ ಬಹಳ ಎತ್ತರಕ್ಕೆ ಬೆಳೆಯುತ್ತೀರ,ನಿಮಗೆ ಅರ್ಹತೆ ಇದೆ. ಯಾವುದೇ ಪರಿಸ್ಥಿತಿಯಲ್ಲಿಯೂ ತಾಳ್ಮೆ ಕಳೆದುಕೊಳ್ಳಬೇಡ ಎಂದರು.
ಭಗವಂತ ನನಗೆ ನಿಮ್ಮೆಲ್ಲರ ಸೇವೆ ಮಾಡಲು ನರೇಂದ್ರ ಮೋದಿಜೀಯವರ ಸಚಿವ ಸಂಪುಟದಲ್ಲಿ ಒಂದು ದೊಡ್ಡ ಅವಕಾಶ ಕಲ್ಪಿಸಿದ್ದಾನೆ. ರೈಲ್ವೆ ಹಾಗೂ ಜಲಚಕ್ತಿ ಈ ಎರಡು ಇಲಾಖೆಯಲ್ಲಿ ಶಕ್ತಿಮೀರಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಶಾಸಕ ಹರೀಶ್ ಪೂಂಜ ಮಾತನಾಡಿ ನಾನು ಶಾಸಕನಾಗಿ ಕೆಲಸ ಮಾಡಿದಾಗ ನನ್ನನ್ನು ತಮ್ಮನಂತೆ ಭಾವಿಸಿ ಹಲವಾರು ಇಲಾಖೆಗಳಿಂದ ಅನುದಾನ ತರುವಲ್ಲಿ ಸಹಕಾರ ನೀಡಿದ್ದಾರೆ.ನಮ್ಮ ಕ್ಷೇತ್ರಕ್ಕೆ ಸೋಮಣ್ಣರವರು ಹಿಂದೆಯೂ ಸಹಾಯ ಮಾಡಿದ್ದಾರೆ. ಮುಂದೆಯೂ ಮಾಡುತ್ತಾರೆ.ಈ ಭಾಗದಲ್ಲಿ ಒಳ್ಳೆಯ ಮಳೆಯಾದರೂ ಫೆಬ್ರವರಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತದೆ. ನಮ್ಮಲ್ಲಿ ಹಲವಾರು ನದಿಗಳಿದ್ದು ಡ್ಯಾಮ್ ನಿರ್ಮಾಣದ ಅವಶ್ಯಕತೆಯಿದೆ.ದಯಪಾಲಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ,ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಾರ್ಯದರ್ಶಿ ವಸಂತಿ ಮಚ್ಚಿನ,ಸೀತರಾಮ್ ಬೆಳಾಲು ಉಪಸ್ಥಿತರಿದ್ದರು.
ಬೆಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್ ಸ್ವಾಗತಿಸಿದರು.ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ ವಂದಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.