April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

ಸುಲ್ಕೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರುವಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಜು.15 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಪ್ರಶಾಂತ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಾಲಿನಿ, ಬೆಳ್ತಂಗಡಿ ತಾಲೂಕು ಕರ್ನಾಟಕ ಯೋಜನಾ ಸಾಮಾಜಿಕ ಪರಿಶೋಧನಾ ವ್ಯವಸ್ಥಾಪಕ ರಾಜೀವ ಸಾಲಿಯನ್, ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ, ಶ್ರೀಮತಿ ರೂಪಶ್ರೀ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷೆ ಶ್ರೀಮತಿ ನಳಿನಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಮಾಜಿ ಅಧ್ಯಕ್ಷ ಸದಾನಂದ ಎಂಕೆ, ಶಾಲಾ ಮುಖ್ಯ ಶಿಕ್ಷಕ ನಾಗಭೂಷಣ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೀತಾ, ಬಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಮಹಿಷ ಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೆಂಕಪ್ಪ ಪೂಜಾರಿ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುಮಲತಾ ಹಾಗೂ ಕುlಪ್ರಮೀಳಾ, ಅಂಗನವಾಡಿ ಸಹಾಯಕಿ ಶ್ರೀಮತಿ ಪ್ರೇಮ ಹಾಗೂ ಮಕ್ಕಳ ಎಲ್ಲಾ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಧ್ಯಾಪಕರಾದ ಸುಬ್ರಮಣ್ಯ ಭಟ್ ನಿರ್ವಹಿಸಿ, ಅಧ್ಯಾಪಿಕೆ ಶ್ರೀಮತಿ ಶಾಂತಿ ಡಿಸೋಜಾ ಸ್ವಾಗತಿಸಿ ಶಿಕ್ಷಕಿ ಶ್ವೇತ ಧನ್ಯವಾದವಿತ್ತರು.


ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ ಮಾಡಲಾಯಿತು. ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ, ಉಪಾಧ್ಯಕ್ಷರಾಗಿ ವೆಂಕಪ್ಪ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ್ ಕೆ ಕಾಡಂಗೆ, ಸಹ ಕಾರ್ಯದರ್ಶಿಯಾಗಿ ಶ್ರೀಮತಿ ನಳಿನಿ , ಕೋಶಾಧಿಕಾರಿಯಾಗಿ ಸದಾಶಿವ ಅವರು ಆಯ್ಕೆಯಾದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya
error: Content is protected !!