24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿ

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

ಕನ್ಯಾಡಿ : ದಕ್ಷಿಣದ ಅಯೋಧ್ಯೆ ಎಂದೇ ಪ್ರಸಿದ್ಧಿ ಪಡೆದಿರುವ ಕನ್ಯಾಡಿ ದೇವರಗುಡ್ಡೆ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಇಂದು ಸಂಜೆ ಕನ್ಯಾಡಿಯ ಶ್ರೀ ಗುರುದೇವ ಮಠಕ್ಕೆ ಆಗಮಿಸಿದರು.

ನಂತರ ಶ್ರೀ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಚಿವ ವಿ. ಸೋಮಣ್ಣ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವ ವಿ. ಸೋಮಣ್ಣ ಅವರನ್ನು ಕ್ಷೇತ್ರದ ಪರವಾಗಿ ಸ್ವಾಮೀಜಿಯವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಂ ಡಿ. ಹಾಗೂ ಇತರರು ಉಪಸ್ಥಿತರಿದ್ದರು.

Related posts

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya
error: Content is protected !!