September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

ಧರ್ಮಸ್ಥಳ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ – ಪ್ರವಚನದಿಂದ ಪ್ರತಿ ಕಲೆಯೂ,  ಕಲಾವಿದರೂ ಬೆಳೆಯಬೇಕು ಎಂದು ಹಿರಿಯ ವಿದ್ವಾಂಸ ಪ್ರೊ. ಎಮ್. ಪ್ರಭಾಕರ ಜೋಶಿ ಹೇಳಿದರು.


ಅವರು ಜು.16 ರಂದು ಧರ್ಮಸ್ಥಳದಲ್ಲಿ ಜು. 16 ರಿಂದ ಆಗೋಸ್ಟ್ 17 ರ ವರೆಗೆ ಪ್ರತಿ ದಿನ ಸಂಜೆ ಗಂಟೆ 6.30 ರಿಂದ 8.00 ರ ವರೆಗೆ ನಡೆಯಲಿರುವ 53ನೆ ವರ್ಷದ “ಜೈಮಿನಿ ಭಾರತ” ಮತ್ತು “ತುರಂಗ ಭಾರತ” ಪುರಾಣ ಕಾವ್ಯ ವಾಚನ – ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ದೇವರ ಕಲ್ಪನೆಯನ್ನು ಜನಮನಕ್ಕೆ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ವಿಷ್ಣುಪುರಾಣ, ಭಾಗವತ, ರಾಮಾಯಣ, ಮಹಾಭಾರತ ಮೊದಲಾದ ಅನೇಕ ಪುರಾಣಗಳಿವೆ. ರಾಮಾಯಣದಲ್ಲಿಯೂ ಬೇರೆ ಬೇರೆ ಭಾಷೆಗಳಲ್ಲಿ ಹಲವು ರೀತಿಯ ರಾಮಾಯಣಗಳು ರಚನೆಯಾಗಿವೆ. ನಮ್ಮ ಸನಾತನ ಧಾರ್ಮಿಕ ಪರಂಪರೆಯನ್ನು ವಿಸ್ತರಿಸಿ ಸೃಜನಶೀಲತೆಯೊಂದಿಗೆ ಜನರಿಗೆ ತಲುಪಿಸುವ ಕಾಯಕವನ್ನು ಪುರಾಣಗಳು ಮಾಡುತ್ತವೆ.  ಪುರಾಣಗಳಲ್ಲಿ ಜ್ಞಾನ, ವಿಜ್ಞಾನ, ಸಾಹಿತ್ಯ, ಕಲೆ, ಸಂಗೀತ, ಮಾನವೀಯ ಮೌಲ್ಯಗಳು – ಎಲ್ಲವೂ ಅಡಕವಾಗಿವೆ ಎಂದು ಪ್ರೊ. ಎಮ್. ಪ್ರಭಾಕರ ಜೋಶಿ  ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗದೊಂದಿಗೆ ವಿಶಿಷ್ಟ ಮಾಹಿತಿ, ಮಾರ್ಗದರ್ಶನ ದೊರಕುತ್ತದೆ.


ನಮ್ಮ ಜ್ಞಾನ ಕ್ಷಿತಿಜ ವಿಸ್ತರಣೆಯಾಗುತ್ತದೆ ಎಂದು ಹೇಳಿದರು.
ಪ್ರಸ್ತುತ ಜನರಲ್ಲಿ ಮಾತನಾಡುವ ಚಟ ಹೆಚ್ಚಾಗಿದೆ. ಕೇಳುವ ವ್ಯವಧಾನ ಯಾರಲ್ಲೂ ಇರುವುದಿಲ್ಲ. ಎಲ್ಲರೂ ಉತ್ತಮ ಶ್ರೋತೃಗಳಾಗಿ ಜೀವನಶೈಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ಮಾತುಗಳೊಂದಿಗೆ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

Related posts

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!