September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರಾದ ಪ್ರಸಾದ್ ಬಿ ಎಸ್ ಭಾಗವಹಿಸಿದರು. ಕಾರ್ಯದರ್ಶಿಗಳಾದ ಅನದೀಪ್ ಜೈನ್ ಇವರ ಧನ್ಯವಾದದೊಂದಿಗೆ ತರಬೇತಿ ಕಾರ್ಯಕ್ರಮ ಮುಕ್ತಯವಾಯಿತು.

Related posts

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!