ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ ಸರಕಾರಿ ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಹರಿಣಿ ಕಾರ್ಯಕ್ರಮ ಉದ್ಘಾಟಿಸಿದರು.
ಸ್ಮರಣ ಸಂಚಿಕೆಯನ್ನು ವೇಣೂರು ಎಸ್ ಡಿ ಎಂ ಐ ಟಿ ಐ ಕಾಲೇಜು ನಿವೃತ್ತ ಪ್ರಾಂಶುಪಾಲ ಸದಾನಂದ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್, ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಗ್ರಾಮ ಪಂಚಾಯತ್ ಸದಸ್ಯ ಚಂದ್ರ ರಾಜ್ ಭಾಗವಹಿಸಿದ್ದರು.
ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ನೂಜೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಶಾಲಾ ಮುಖ್ಯೋಪಾಧ್ಯಾಯಿನಿ ರೂಪ, ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಹರ್ಷ ಹೆಚ್.ಆರ್., ಸಮಿತಿಯ ಪದಾಧಿಕಾರಿಗಳು, ಊರವರು ಹಾಜರಿದ್ದರು.