April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

ನೆಲ್ಯಾಡಿ: ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರಂದು ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.

ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya
error: Content is protected !!