24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಡಿ. ರವರ ಅಧ್ಯಕ್ಷತೆಯಲ್ಲಿ ಜು.18ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಪಂಚಾಯತ್‌ ಉಪಾಧ್ಯಕ್ಷ ಯಶೋಧರ ಕೆ.ವಿ, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಸಿಬ್ಬಂದಿ ಸುಂದರ ಜಮಾ -ಖರ್ಚು ಹಾಗೂ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು.

ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸ್ವಾಗತಿಸಿದರು.

.

Related posts

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya
error: Content is protected !!