22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ ಸರಕಾರಿ ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಹರಿಣಿ ಕಾರ್ಯಕ್ರಮ ಉದ್ಘಾಟಿಸಿದರು.

ಸ್ಮರಣ ಸಂಚಿಕೆಯನ್ನು ವೇಣೂರು ಎಸ್ ಡಿ ಎಂ ಐ ಟಿ ಐ ಕಾಲೇಜು ನಿವೃತ್ತ ಪ್ರಾಂಶುಪಾಲ ಸದಾನಂದ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್, ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಗ್ರಾಮ ಪಂಚಾಯತ್ ಸದಸ್ಯ ಚಂದ್ರ ರಾಜ್ ಭಾಗವಹಿಸಿದ್ದರು.

ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ನೂಜೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಶಾಲಾ ಮುಖ್ಯೋಪಾಧ್ಯಾಯಿನಿ ರೂಪ, ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಹರ್ಷ ಹೆಚ್.ಆರ್., ಸಮಿತಿಯ ಪದಾಧಿಕಾರಿಗಳು, ಊರವರು ಹಾಜರಿದ್ದರು.

Related posts

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya
error: Content is protected !!