24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!