April 2, 2025
ಗ್ರಾಮಾಂತರ ಸುದ್ದಿ

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

ಮುಂಡಾಜೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂಡಾಜೆ ವಲಯ ಶ್ರೀ ಲಕ್ಶ್ಮೀ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಣೇಶ್ ಬಂಗೇರ ರವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಜಯರಾಮ್ ಸರ್ ರವರು ಚೆನ್ನೆ ಮನೆ ಯನ್ನು ಆಡುವುದರ ಮೂಲಕ ಆಟಿ ತಿಂಗಳ ವಿಶೇಷತೆಯನ್ನು ತಿಳಿಸಿ ಆಹಾರದಲ್ಲಿರುವಂತಹ ಪೋಷಕಾಂಶಗಳ ಬಳಕೆಯನ್ನು ಹೇಗೆ ಮಾಡಬೇಕು. & ಹಿಂದಿನ ಕಾಲದಲ್ಲಿ,ಆಟಿ ತಿಂಗಳಲ್ಲಿ ಸೇವಿಸುವ ಆಹಾರಗಳ ಬಗ್ಗೆ, ಯಾವ ರೀತಿ ಪೌಷ್ಠಿಕ ಆಹಾರ ಸೇವನೆ ಮಾಡುತ್ತಿದ್ದರು ಎಂಬುವುದರ ಬಗ್ಗೆ ವಿವರವಾಗಿ ತಿಳಿಸಿದರು ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ಸರ್ ರವರು ನಾವು ಹಿಂದಿನ ಕಾಲದಲ್ಲಿ ಮನೆಯಲ್ಲಿ ಬೆಳೆದ & ಮನೆ ಸುತ್ತಮುತ್ತ ಸಿಗುವಂತಹ ಉತ್ತಮ ಪೌಷ್ಟಿಕಾoಶವುಳ್ಳ ಆಹಾರ ಸೇವಿಸುತ್ತಿದ್ದ ಕಾರಣ ನಮ್ಮ ಹಿರಿಯರು ಅರೋಗ್ಯ ವಂತರಾಗಿದ್ದರು. ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಜ್ಞಾನ ವಿಕಾಸ ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು ಒಕ್ಕೂಟದ ಅಧ್ಯಕ್ಷರಾದ ಸತೀಶ್ರವರು ಹಾಗೂ ಕೇಂದ್ರದ ಸಂಯೋಜಕಿ ಶರ್ಮಿಳಾರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಸುಂದರಿಯವರು ವಹಿಸಿದ್ದರು
ಸಮನ್ವಯಧಿಕಾರಿಯರಾದ ಮಧುರ ವಸಂತ್ ರವರು ಜ್ಞಾನ
ನಿರೂಪಿಸಿದ ಕಾರ್ಯಕ್ರಮದಲ್ಲಿಸೇವಾಪ್ರತಿನಿಧಿ ಲೀಲಾವತಿ ಸ್ವಾಗತಿಸಿ ಸದಸ್ಯರಾದ ಶೈಲಾಶ್ರೀ ಯವರು ಧನ್ಯವಾದ ನೀಡಿದರು

Related posts

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!