33.5 C
ಪುತ್ತೂರು, ಬೆಳ್ತಂಗಡಿ
November 25, 2024
ಪೊಲೀಸ್ಪ್ರಮುಖ ಸುದ್ದಿ

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಹಾಗೂ ಮರದ ದಿಮ್ಮಿ ವಶಪಡಿಸಿಕೊಂಡಿದೆ.

ಸುಳ್ಯ ತಾಲೂಕು ಅಲೆಟ್ಟಿ ನಿವಾಸಿ ನಿಖಿಲ್ ನಿಖಿಲ್ ಸಂಗಮ್(26ವ.)ಬಂಧಿತ ಲಾರಿ ಚಾಲಕ. ಈತ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಲಾರಿಯೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮಂಗಳೂರು ಕಡೆಗೆ ಕಲ್ಬಾಗೆ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪತ್ತೆಹಚ್ಚಿದೆ. ಲಾರಿ ಹಾಗೂ ಸುಮಾರು 23 ಕಲ್ಬಾಗೆ ಮರದ ದಿಮ್ಮಿ ವಶಪಡಿಸಿಕೊಂಡಿರುವ ಅರಣ್ಯ ಇಲಾಖಾಧಿಕಾರಿಗಳ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಆರ್‌ಎಫ್‌ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್‌ಒ ಭವಾನಿಶಂಕರ್, ಫಾರೆಸ್ಟರ್ ವಿನಯ್‌ಚಂದ್ರ, ತೇಜಕುಮಾರ್ ಹಾಗೂ ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!