September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya
error: Content is protected !!