29.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!