25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!