38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ