September 6, 2026
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!