ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ , ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ ಜು.22 ರಂದು ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯು ನಡೆಯಿತು.

ಪ್ರತಿಭಟನಾಕಾರರು ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ತಹಶೀಲ್ದಾರ್ ಪೃಥ್ವಿಸಾನಿಕಂ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಾಂಕೇತಿಕವಾಗಿ ಭಜನೆ ನಡೆಸುವುದರ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ , ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಪ್ರೀತಮ್ ಧರ್ಮಸ್ಥಳ, ಗಿರೀಶ್ ಬಂದಾರು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಿದ್ದರು.

ವಿನೀತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Leave a Comment

error: Content is protected !!