March 7, 2026
ತಾಲೂಕು ಸುದ್ದಿವರದಿ

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜು.22 ಮತ್ತು 23ರಂದು 25 ಗಂಟೆಗಳ ನಿರಂತರ ಯೋಗ ಕಾರ್ಯಕ್ರಮವು ನಡೆಯಲಿದ್ದು. ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಿದರು.

ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್, ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಯಿತು.


ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂ.100, ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಯಿತು.

ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುತ್ತದೆ.
ಮುಗೇರಡ್ಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾಭಿಮಾನಿಗಳು, ಟ್ರಸ್ಟಿಗಳು, ಮುಖ್ಯೋಪಾಧ್ಯಾಯರು, ಹಳೇವಿದ್ಯಾರ್ಥಿಗಳು ಯೋಗಾಸನ ಶಿಬಿರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡರು.

Related posts

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya
error: Content is protected !!