31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

ಉಜಿರೆ: ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು. ಪ್ರತೀಕ್ಷಾ ರವರು 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ. ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ಉಜಿರೆಯ ಕೃಷ್ಣ ಪ್ರಸಾದ್ ಮತ್ತು ಶ್ರೀಮತಿ ಹೇಮಾ ಆನಂದ್ ಅವರ ಸುಪುತ್ರಿ.
ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜು 2023-24 ಸಾಲಿನ ಅಂತಿಮ ವರ್ಷದ ಪರೀಕ್ಷೆಗಳಲ್ಲಿ ಎಲ್ಲಾ ಆರು ಇಂಜಿನಿಯರಿಂಗ್ ವಿಭಾಗಗಳಲ್ಲಿ ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ರವರು ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿರುವರೆಂದು ಪ್ರಾಂಶುಪಾಲರಾದ ಡಾ. ಅಶೋಕ್‌ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya
error: Content is protected !!