25.4 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

Related posts

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya
error: Content is protected !!