September 6, 2026
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya
error: Content is protected !!