April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜು.22 ಮತ್ತು 23ರಂದು ನಡೆದ 25 ಗಂಟೆಗಳ 1ನಿಮಿಷ 38 ಸೆಕೆಂಡ್ ಗಳ ನಿರಂತರ ಯೋಗ ಕಾರ್ಯಕ್ರಮ ನಡೆದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಗೊಂಡಿದೆ.


ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಿದ್ದು , ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಭಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಯಿತು .


ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100, ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಯಿತು.

ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಗೊಂಡಿದೆ.


ಮುಗೇರಡ್ಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾಭಿಮಾನಿಗಳು, ಶಾಲಾ ಟ್ರಸ್ಟಿಗಳು ಮತ್ತು ಬಂದಾರು ಗ್ರಾ.ಪಂ, ಸದಸ್ಯ ಬಾಲಕೃಷ್ಣ ಮುಗೇರಡ್ಕ, ಮುಖ್ಯೋಪಾಧ್ಯಾಯರು ಮಾಧವ ಮುಗೇರಡ್ಕ, ಹಳೇವಿದ್ಯಾರ್ಥಿಗಳು ಯೋಗಾಸನ ಶಿಬಿರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡರು.

Related posts

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!