24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 22ನೇ ವಾರ್ಷಿಕ ಸಭೆ ಜು.23ರಂದು ಗುರುವಾಯನಕೆರೆ ಛಾಯಾ ಭವನದಲ್ಲಿ ನಡೆಯಿತು.

ಎಸ್‌ಕೆಪಿಎ ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ ಸಂಘಟನೆಯಲ್ಲಿ ನಿಶ್ವಾರ್ತ ಸೇವೆಯನ್ನು ನೀಡುವ ಮೂಲಕ ಸಂಘಟನೆಯು ಬಲವರ್ಧನೆ ಆಗಲು ಸದಸ್ಯರ ಸಹಕಾರ ಅಗತ್ಯ ಸಂಘವನ್ನು ಕಟ್ಟಿ ಬೆಳೆಸಿದ ಹಿರಿಯರ ಮಾರ್ಗದರ್ಶನದೊಂದಿಗೆ ಮುನ್ನಡೆಯುವುದು ಉತ್ತಮ ಎಂದು ಹೇಳಿದರು.

ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರಧ್ವಜ್, ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್ ಜಾರ್ಚ್ ಗೊನ್ಸಾಲ್ವಿಸ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ. ವಸಂತ ಶರ್ಮ, ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ ಉಪಸ್ದತರಿದ್ದರು.

ಬೆಳ್ತಂಗಡಿ ವಲಯದ ಸ್ಧಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ ಪ್ರಾಸ್ತಾವಿಕವಾಗಿ ಮಾತಾನಾಡಿದರು. ವಲಯದ ಪ್ರಧಾನ ಕಾರ್ಯದರ್ಶಿ ವಿಜಯ ಹೆಚ್. ಪ್ರಸಾದ್ ವರದಿ ಮಂಡಿಸಿದರು. ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಲೆಕ್ಕಪತ್ರ ಮಂಡಿಸಿದರು.ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆಗೈದರು. ಜಗದೀಶ್ ಜೈನ್ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ಕೆ ವಸಂತ್ ಶರ್ಮ ವಂದಿಸಿದರು.

Related posts

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!