ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.24ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ರವರು ಮಾತನಾಡಿ ಸರಕಾರದ ಏನೇ ಅನುದಾನ ಇದ್ದಲ್ಲಿ ಪ್ರಾಮಾಣಿಕವಾಗಿ ಅದನ್ನು ದೊರಕಿಸುವಲ್ಲಿ ಕೆಲಸ ಮಾಡುತ್ತೇವೆ. ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಮುಂದಕ್ಕೂ ಬೇಕು ಎಂದರು.
ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಸದಸ್ಯರಾದ ಜನಾರ್ಧನ ಪೂಜಾರಿ, ಗೋಪಾಲ ಶೆಟ್ಟಿ, ಧನಂಜಯ್, ಶ್ರೀಮತಿ ಗೀತಾ, ಶ್ರೀಮತಿ ತೇಜಾಕ್ಷಿ, ಶ್ರೀಮತಿ ಗುಣವತಿ, ಶ್ರೀಮತಿ ರಜನಿ, ದಿನೇಶ್ ಮೂಲ್ಯ, ಶ್ರೀಮತಿ ಪವಿತ್ರ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನವೀನ್ ಎ ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸಿಬ್ಬಂದಿ ಆನಂದ್ ಸ್ವಾಗತಿಸಿ ಧನ್ಯವಾದವಿತ್ತರು.