23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

ಬೆಳ್ತಂಗಡಿ: ಅಹಿಂಸಾ ಪರಮೋ ಧರ್ಮ ಎನ್ನುವುದು ಜಗತ್ತಿಗೆ ಜೈನ ಧರ್ಮ ಸಾರಿದ ಉದಾತ್ತ ಚಿಂತನೆಯಾಗಿದೆ. ಭಗವಾನ್ ಮಹಾವೀರರ ಸಂದೇಶ ಜೈನ ಧರ್ಮದ ತಳಪಾಯವಾಗಿದ್ದು, ಜೈನತ್ವ ಎನ್ನುವುದು ಹುಟ್ಟಿನಿಂದ ನಿರ್ಧಾರವಾಗುವುದಿಲ್ಲ; ಆಚರಣೆಯಿಂದ ಬರುವಂಥದ್ದು ಎಂದು ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಹೇಳಿದರು.

ಅವರು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವಲಯ 8 ರ ಜುಲೈ ತಿಂಗಳ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಜುಲೈ ತಿಂಗಳ ಮಾಸಿಕ ಸಭೆಯ ಆತಿಥ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರನ್ನು ಘಟಕದ ಹಿರಿಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ ಶೆಟ್ಟಿ ಅಭಿನಂದಿಸಿ, ‘ ಹಣ ಇಲ್ಲದವ ಬಡವನಲ್ಲ. ಕನಸು ಮತ್ತು ಗುರಿ ಇಲ್ಲದವ ಬಡವ,ಧೈರ್ಯ ಮತ್ತು ಆತ್ಮವಿಶ್ವಾಸ ಇದ್ದರೆ ಕಠಿಣ ಗುರಿಯಿದ್ದರೂ ತಲುಪ ಬಹುದು ಎನ್ನುವುದಕ್ಕೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಉದಾಹರಣೆ ‘ ಎಂದರು.

ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಘಟಕದ ಈ ಸಭೆಯಲ್ಲಿ ಭಾರತೀಯ ಜೈನ್ ಮಿಲನ್ ಬೆಳ್ತಂಗಡಿಯ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ವೀರ್ ಶಾಂತಿರಾಜ್ ಜೈನ್ ಪಡಂಗಡಿ ಸ್ವಾಗತಿಸಿದರೆ, ಘಟಕದ ಖಜಾಂಚಿ ವೀರ್ ನಿಕಿತ್ ಕುಮಾರ್ ಜೈನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಘಟಕದ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಇವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸುಮಧುರ ಗಾಯನ ನಡೆಯಿತು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya
error: Content is protected !!