ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು.

ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮ ಕುಶಲತೆಯನ್ನು ಧರ್ಮಗುರುಗಳಾದ ವಂದನೀಯ ಫಾದರ್ ಶಾಜಿ ಮಾತ್ಯು ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು. ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ವಂದನೀಯ ಸಿಸ್ಟರ್ ಲಿಸ್ ಮಾತ್ಯು ಎಸ್.ಎಚ್., ಟ್ರಸ್ಟಿಗಳಾದ ಅಲೆಕ್ಸ್, ಫಾದರ್ ಎಬಿನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ನಡೆದ ಈ ಸನ್ಮಾನ ಕಾರ್ಯಕ್ರಮವು ಬಿಜು ಅವರ ಸೇವಾ ಮನೋಭಾವನೆಗೆ ಗೌರವ ಸಲ್ಲಿಸುವುದರೊಂದಿಗೆ, ಬರುವ ದಿನಗಳಲ್ಲಿ ಧರ್ಮ ಪ್ರಾಂತ್ಯದ ಇತರರನ್ನು ಸ್ಫೂರ್ತಿ ನೀಡಲು ಕಾರಣವಾಯಿತು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya
error: Content is protected !!