September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ದೇಶದಲ್ಲಿ ಸುವ್ಯವಸ್ಥಿತ ಆಡಳಿತ ನಡೆಯಬೇಕಾದರೆ ಪ್ರತಿಯೊಬ್ಬರು ಸಂವಿಧಾನಿಕ ಕಾನೂನುಗಳನ್ನು ಪಾಲಿಸಲೇಬೇಕು ಎಂದು ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ.ಕೆ ಹೇಳಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಮತ್ತು ವಕೀಲರ ಸಂಘ ಬೆಳ್ತಂಗಡಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಆಶ್ರಯದಲ್ಲಿ ಜರುಗಿದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಪೋಕ್ಸೊ ಕಾಯಿದೆಯ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಾನೂನುಗಳ ಅರಿವನ್ನು ಹೊಂದಿರಬೇಕು. ಸಾರ್ವಜನಿಕವಾಗಿ ವ್ಯವಹರಿಸುವಾಗ ಜಾಗೃತವಾಗಿರಬೇಕು. ಲೈಂಗಿಕ ಅಪರಾಧಗಳಿಗೆ ಬಲಿಯಾಗದೆ ಸುಸ್ಥಿರ ಸಮಾಜದ ವಾರಿಸುದಾರರಾಗಬೇಕು ಎಂದರು.


ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಬಿ.ಕೆ. ಪೋಕ್ಸೊ ಕಾಯಿದೆ ಹಾಗೂ ಬಾಲ್ಯ ವಿವಾಹದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ ಹದಿಹರೆಯದ ವಿದ್ಯಾರ್ಥಿಗಳು ಲೈಂಗಿಕ ತೊಂದರೆಗೆ ಒಳಗಾದಾಗ ಅವರ ಸಂರಕ್ಷಣೆ ಮತ್ತು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೊ ಕಾಯಿದೆ ಕರ್ತವ್ಯ ನಿರ್ವಹಿಸುತ್ತದೆ. ಬಾಲ್ಯ ವಿವಾಹದಂತಹ ಸಮಸ್ಯೆಗಳಿಂದ ಮುಕ್ತರಾಗಿ ಸಂವಿಧಾನ ನೀಡಲ್ಪಟ್ಟ ಹಕ್ಕುಗಳ ಬಗ್ಗೆ ತಿಳಿದುಕೊಂಡು ವ್ಯವಹರಿಸಬೇಕು. ಇದರೊಂದಿಗೆ ಕರ್ತವ್ಯಕ್ಕೆ ಬದ್ಧರಾಗಿರಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ವಂದಿಸಿದರು. ಕು|ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya
error: Content is protected !!