23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜುಲೈ 25 ರಿಂದ ಆರಂಭಿಸಲಾಗುವುದು.

ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.
ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. ( 9113636880 ) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya
error: Content is protected !!