29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ತಮ್ಮ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ಗಳನ್ನು ಕಾಲೇಜಿನ ಕ್ರೀಡಾ ವಿಭಾಗದಲ್ಲಿ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿತರಿಸಿದರು.


ಈ ಸಂದರ್ಭದಲ್ಲಿ ಕಾಲೇಜ್ ನೀಡಿರುವ ಪ್ರೋತ್ಸಾಹ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ನಿರಂತರ ತರಬೇತಿಯನ್ನು ಕು. ಚಿನ್ಮಯಿ ನೆನಪಿಸಿಕೊಂಡರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್, ಚಿನ್ಮಯಿಯವರ ಈ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಕಾರ್ಯ ಇತರರಿಗೆ ಮಾದರಿಯಾಗಲಿ ಎಂದು ಶುಭಹಾರೈಸಿದರು.


ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಮತ್ತು ನಿತಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚಿರಂತ್ ಸ್ವಾಗತಿಸಿ, ಪ್ರದೀಪ್ ವಂದಿಸಿದರು. ಪುನೀತ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya
error: Content is protected !!